೧ ಪೇತ್ರನು 2:9

ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.

ಸಂದರ್ಭದೊಂದಿಗೆ ಓದಿ · ೧ ಪೇತ್ರನು 2

7ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.

8ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.

9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.

10ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.

11ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

೧ ಪೇತ್ರನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी