ಯೆಹೆಜ್ಕೇಲನು 9:7

ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 9

5ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ.

6ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು.

7ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು.

8ಅವರು ಹತಮಾಡುತ್ತಿರುವಾಗ ನಾನು ಬಿಡಿಸಲ್ಪಟ್ಟೆನು. ಆಗ ನಾನು ಮೋರೆ ಕೆಳಗಾಗಿ ಬಿದ್ದು ಕೂಗಿ--ಹಾ, ದೇವರಾದ ಕರ್ತನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಸುರಿಯುವದರಲ್ಲಿಯೇ ಇಸ್ರಾ ಯೇಲ್ಯರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ ಎಂದೆನು.

9ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ.

ಯೆಹೆಜ್ಕೇಲನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी