ಎಫೆಸದವರಿಗೆ 4:30

ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.

ಸಂದರ್ಭದೊಂದಿಗೆ ಓದಿ · ಎಫೆಸದವರಿಗೆ 4

28ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.

29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.

30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.

31ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.

32ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.

ಎಫೆಸದವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी