ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.
12ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.
13ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
14ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.
15ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
16ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ