೨ ಪೂರ್ವಕಾಲವೃತ್ತಾಂತ 33:17

ಆದಾಗ್ಯೂ ಜನರು ಇನ್ನೂ ಉನ್ನತ ಸ್ಥಳ ಗಳಲ್ಲಿಯೇ ತಮ್ಮ ದೇವರಾದ ಕರ್ತನಿಗೆ ಮಾತ್ರ ಬಲಿಯನ್ನರ್ಪಿಸುತ್ತಾ ಇದ್ದರು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 33

15ಇದಲ್ಲದೆ ಅವನು ಅನ್ಯ ದೇವರುಗಳನ್ನೂ ಕರ್ತನ ಆಲಯದಲ್ಲಿರುವ ವಿಗ್ರಹವನ್ನೂ ಕರ್ತನ ಆಲಯದ ಪರ್ವತದಲ್ಲಿಯೂ ಯೆರೂಸಲೇಮಿನ ಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.

16ಅವನು ಕರ್ತನ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಸಮಾಧಾನದ ಬಲಿಗಳನ್ನೂ ಸ್ತೋತ್ರದ ಬಲಿಗಳನ್ನೂ ಅರ್ಪಿಸಿ ಇಸ್ರಾಯೇಲಿನ ದೇವರಾದ ಕರ್ತನನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿ ದನು.

17ಆದಾಗ್ಯೂ ಜನರು ಇನ್ನೂ ಉನ್ನತ ಸ್ಥಳ ಗಳಲ್ಲಿಯೇ ತಮ್ಮ ದೇವರಾದ ಕರ್ತನಿಗೆ ಮಾತ್ರ ಬಲಿಯನ್ನರ್ಪಿಸುತ್ತಾ ಇದ್ದರು.

18ಮನಸ್ಸೆಯ ಇತರ ಕ್ರಿಯೆಗಳೂ ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ಇಸ್ರಾಯೇಲಿನ ದೇವರಾದ ಕರ್ತನ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

19ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.

೨ ಪೂರ್ವಕಾಲವೃತ್ತಾಂತ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी