ಯಾಜಕಕಾಂಡ 6:12

ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 6

10ಯಾಜಕನು ತನ್ನ ನಾರು ಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರು ಮಡಿಯ ಇಜಾರುಗಳನ್ನೂ ಹಾಕಿಕೊಂಡು ಯಜ್ಞ ವೇದಿಯ ಮೇಲೆ ದಹನಬಲಿಯೊಂದಿಗೆ ಬೆಂಕಿಯಲ್ಲಿ ಸುಟ್ಟು ಬೂದಿಯನ್ನು ತೆಗೆದುಕೊಂಡು ಅದನ್ನು ಯಜ್ಞ ವೇದಿಯ ಬಳಿಯಲ್ಲಿ ಹಾಕಬೇಕು.

11ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ ಬೇರೆ ಉಡುಪುಗಳನ್ನು ಧರಿಸಿಕೊಂಡು ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.

12ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು.

13ಯಜ್ಞವೇದಿಯ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು. ಅದು ಎಂದಿಗೂ ಆರಿಹೋಗಬಾರದು.

14ಆಹಾರ ಸಮರ್ಪಣೆಯ ನಿಯಮವು ಇದೇ; ಆರೋನನ ಕುಮಾರರು ಯಜ್ಞವೇದಿಯ ಮುಂದೆ ಕರ್ತನ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.

ಯಾಜಕಕಾಂಡ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी