ನನ್ನ ಸೇವಕನಾದ ಮೋಶೆಯು ಸತ್ತನು; ಈಗ ನೀನು ಈ ಜನರೆಲ್ಲರ ಸಹಿತವಾಗಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶಕ್ಕೆ ಹೋಗು.
1ಕರ್ತನ ಸೇವಕನಾದ ಮೋಶೆ ಸತ್ತ ತರುವಾಯ ಕರ್ತನು ಮೋಶೆಯ ಸೇವಕನಾದ ನೂನನ ಮಗನಾಗಿರುವ ಯೆಹೋಶುವನಿಗೆ--
2ನನ್ನ ಸೇವಕನಾದ ಮೋಶೆಯು ಸತ್ತನು; ಈಗ ನೀನು ಈ ಜನರೆಲ್ಲರ ಸಹಿತವಾಗಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶಕ್ಕೆ ಹೋಗು.
3ನಾನು ಮೋಶೆಗೆ ಹೇಳಿದ ಹಾಗೆ ನಿಮ್ಮ ಪಾದವು ತುಳಿಯುವ ಎಲ್ಲಾ ಸ್ಥಳವನ್ನು ನಿಮಗೆ ಕೊಟ್ಟೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ