ಎಷ್ಟರ ವರೆಗೆ ನಾನು ಧ್ವಜವನ್ನು ನೋಡುತ್ತಾ ತುತೂರಿಯ ಶಬ್ದವನ್ನು ಕೇಳಲಿ?
19ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
20ನಾಶ ನದ ಮೇಲೆ ನಾಶನವು ಕೂಗಲ್ಪಟ್ಟಿದೆ, ದೇಶವೆಲ್ಲಾ ಹಾಳಾಯಿತು; ಫಕ್ಕನೆ ನನ್ನ ಗುಡಾರಗಳೂ ಕ್ಷಣ ಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.
21ಎಷ್ಟರ ವರೆಗೆ ನಾನು ಧ್ವಜವನ್ನು ನೋಡುತ್ತಾ ತುತೂರಿಯ ಶಬ್ದವನ್ನು ಕೇಳಲಿ?
22ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
23ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ