ಮೂಷೀಯ ಕುಮಾರರು-- ಮಹ್ಲೀಯು ಏದೆರ್ ಯೆರೇಮೋತ್ ಈ ಮೂರು ಮಂದಿ.
21ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್, ಕೀಷನು;
22ಎಲ್ಲಾಜಾರ್ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು.
23ಮೂಷೀಯ ಕುಮಾರರು-- ಮಹ್ಲೀಯು ಏದೆರ್ ಯೆರೇಮೋತ್ ಈ ಮೂರು ಮಂದಿ.
24ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು.
25ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ