ಯೆಶಾಯ 6:5

ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.

ಸಂದರ್ಭದೊಂದಿಗೆ ಓದಿ · ಯೆಶಾಯ 6

3ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.

4ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು.

5ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.

6ಆಗ ಸೆರಾಫಿಯರಲ್ಲಿ ಒಬ್ಬನು ತಂಡಸದಿಂದ ಯಜ್ಞವೇದಿಯಲ್ಲಿರುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ಹಾರಿಬಂದು

7ಅದನ್ನು ನನ್ನ ಬಾಯಲ್ಲಿ ಇಟ್ಟು--ಇಗೋ, ಇದು ನಿನ್ನ ತುಟಿಗೆ ತಗಲಿತು; ನಿನ್ನ ದೋಷವು ತೊಲಗಿ ನಿನ್ನ ಪಾಪವು ನೀಗಿ ಶುದ್ಧವಾಯಿತು ಎಂದು ಹೇಳಿದನು.

ಯೆಶಾಯ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी