ಕರ್ತನು ಅಮೋರಿಯರ ಅರಸನಾದ ಸೀಹೋನನಿಗೂ ಓಗನಿಗೂ ಆತನು ನಾಶಮಾಡಿದ ಅವರ ದೇಶಕ್ಕೂ ಮಾಡಿದಂತೆ ಆ ಜನಾಂಗಗಳಿಗೆ ಮಾಡುವನು.
2ಅವನು ಅವರಿಗೆ--ನಾನು ಈಹೊತ್ತು ನೂರ ಇಪ್ಪತ್ತು ವರುಷದವನಾಗಿದ್ದೇನೆ; ನಾನು ಇನ್ನು ಹೊರಗೆ ಹೋಗುವದಕ್ಕೂ ಬರುವದಕ್ಕೂ ಶಕ್ತನಲ್ಲ; ಇದಲ್ಲದೆ ಕರ್ತನು ನನಗೆ--ನೀನು ಈ ಯೊರ್ದನನ್ನು ದಾಟುವದಿ ಲ್ಲವೆಂದು ಹೇಳಿದ್ದಾನೆ.
3ನಿನ್ನ ದೇವರಾದ ಕರ್ತನು ತಾನೇ ನಿನ್ನ ಮುಂದೆ ಹೋಗುವನು. ಆತನು ಆ ಜನಾಂಗಗಳನ್ನು ನಿನ್ನ ಮುಂದೆ ನಾಶಮಾಡುವನು; ನೀನು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿ; ಕರ್ತನು ಹೇಳಿದ ಪ್ರಕಾರ ಯೆಹೋಶುವನು ನಿನ್ನ ಮುಂದೆ ಹೋಗುವನು.
4ಕರ್ತನು ಅಮೋರಿಯರ ಅರಸನಾದ ಸೀಹೋನನಿಗೂ ಓಗನಿಗೂ ಆತನು ನಾಶಮಾಡಿದ ಅವರ ದೇಶಕ್ಕೂ ಮಾಡಿದಂತೆ ಆ ಜನಾಂಗಗಳಿಗೆ ಮಾಡುವನು.
5ನಾನು ನಿಮಗೆ ಆಜ್ಞಾಪಿಸಿದ ಸಮಸ್ತ ಆಜ್ಞೆಯ ಪ್ರಕಾರ ನೀವು ಅವರಿಗೆ ಮಾಡುವಹಾಗೆ ಕರ್ತನು ಅವರನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವನು.
6ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ