ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ.
5ಸಿರಿಯಾದವರೂ ಎಫ್ರಾಯಿಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ದುರಾಲೋಚನೆ ಮಾಡಿ,
6ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು
7ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ.
8ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು.
9ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ