ಜೆಕರ್ಯ 4:9

ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.

ಸಂದರ್ಭದೊಂದಿಗೆ ಓದಿ · ಜೆಕರ್ಯ 4

7ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.

8ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು. ಹೇಗಂದರೆ--

9ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.

10ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.

11ಆಗ ನಾನು ಉತ್ತರ ಕೊಟ್ಟು ಅವನಿಗೆ--ದೀಪಸ್ತಂಭದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ಇರುವ ಈ ಎರಡು ಇಪ್ಪೇಮರಗಳು ಏನು ಅಂದೆನು.

ಜೆಕರ್ಯ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी