ಗುಡಾರಕ್ಕೆ ಜಾಲೀ ಮರದಿಂದ ನಿಲ್ಲುವ ಹಲಿಗೆ ಗಳನ್ನು ಮಾಡಬೇಕು.
13ಗುಡಾರದ ತೆರೆಗಳ ಉದ್ದದಲ್ಲಿ ಆಚೆ ಈಚೆ ಮಿಕ್ಕಿದ ಒಂದು ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವದಕ್ಕಾಗಿ ತೂಗಾಡಲಿ.
14ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು.
15ಗುಡಾರಕ್ಕೆ ಜಾಲೀ ಮರದಿಂದ ನಿಲ್ಲುವ ಹಲಿಗೆ ಗಳನ್ನು ಮಾಡಬೇಕು.
16ಹಲಿಗೆಯ ಉದ್ದವು ಹತ್ತು ಮೊಳ, ಅದರ ಅಗಲ ಒಂದುವರೆ ಮೊಳ ಇರಬೇಕು.
17ಒಂದು ಹಲಗೆಗೆ ಎರಡು ಕೂರುಗಳು ಇರಬೇಕು. ಅವುಗಳನ್ನು ಕ್ರಮವಾಗಿ ಇರಿಸುವಂತೆ ಅವು ಎದುರು ಬದುರಾಗಿ ಇರಬೇಕು. ಹೀಗೆ ಗುಡಾರದ ಎಲ್ಲಾ ಹಲಗೆ ಗಳಿಗೂ ನೀನು ಮಾಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ