ಚೆಫನ್ಯ 3:10

ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿ ಹೋದವರ ನನ್ನ ಮಗಳೂ ನನ್ನ ಕಾಣಿಕೆಯನ್ನು ತರುವರು.

ಸಂದರ್ಭದೊಂದಿಗೆ ಓದಿ · ಚೆಫನ್ಯ 3

8ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.

9ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.

10ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿ ಹೋದವರ ನನ್ನ ಮಗಳೂ ನನ್ನ ಕಾಣಿಕೆಯನ್ನು ತರುವರು.

11ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.

12ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು.

ಚೆಫನ್ಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी