ಅಪೊಸ್ತಲರ ಕೃತ್ಯಗಳು 27:5

ಇದಾದ ಮೇಲೆ ನಾವು ಕಿಲಿಕ್ಯ ಮತ್ತು ಪಂಪುಲ್ಯದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಲುಕೀಯ ಪಟ್ಟಣವಾದ ಮುರಕ್ಕೆ ಬಂದೆವು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 27

3ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.

4ಅಲ್ಲಿಂದ ನಾವು ಪ್ರಯಾಣ ವನ್ನು ಪ್ರಾರಂಭಿಸಿದಾಗ ಎದುರುಗಾಳಿಯು ಇದ್ದದ ರಿಂದ ಕುಪ್ರದ ಮರೆಯಲ್ಲಿ ಪ್ರಯಾಣಮಾಡಿದೆವು.

5ಇದಾದ ಮೇಲೆ ನಾವು ಕಿಲಿಕ್ಯ ಮತ್ತು ಪಂಪುಲ್ಯದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಲುಕೀಯ ಪಟ್ಟಣವಾದ ಮುರಕ್ಕೆ ಬಂದೆವು.

6ಅಲ್ಲಿ ಇತಾಲ್ಯಕ್ಕೆ ಸಮುದ್ರ ಪ್ರಯಾಣ ಮಾಡುವ ಅಲೆಕ್ಸಾಂದ್ರಿಯದ ಒಂದು ಹಡಗನ್ನು ಶತಾಧಿಪತಿಯು ಕಂಡು ಅದರಲ್ಲಿ ನಮ್ಮನ್ನು ಹತ್ತಿಸಿದನು.

7ನಾವು ಅನೇಕ ದಿವಸ ನಿಧಾನವಾಗಿ ಸಾಗಿದಾಗ್ಯೂ ಎದುರುಗಾಳಿಯ ದೆಸೆ ಯಿಂದ ಸಲ್ಮೊನೆಗೆ ಎದುರಾಗಿ ಕ್ರೇತದ ಮರೆಯಲ್ಲಿ ಪ್ರಯಾಣ ಮಾಡಿದೆವು;

ಅಪೊಸ್ತಲರ ಕೃತ್ಯಗಳು 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी