ಮತ್ತಾಯನು 6:29

ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ.

ಸಂದರ್ಭದೊಂದಿಗೆ ಓದಿ · ಮತ್ತಾಯನು 6

27ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ?

28ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ.

29ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ.

30ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?

31ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.

ಮತ್ತಾಯನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी