ಕರ್ತನ ವಾಕ್ಯವು ನನಗೆ ತಿರಿಗಿ ಬಂದು ಹೇಳಿದ್ದೇ ನಂದರೆ--
10ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು; ವಿಚಾರಿಸು ವವನ ದಂಡನೆಯು ಹೇಗೋ ಹಾಗೆಯೇ ಪ್ರವಾ ದನೆಯ ದಂಡನೆಯೂ ಇರುವದು.
11ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವ ದರಿಂದ ಅವರು ನನ್ನ ಜನರಾಗಿರುವರು ಅವರಿಗೆ ನಾನು ದೇವರಾಗಿರುವೆನು, ಎಂದು ದೇವರಾದ ಕರ್ತನು ಹೇಳುತ್ತಾನೆ.
12ಕರ್ತನ ವಾಕ್ಯವು ನನಗೆ ತಿರಿಗಿ ಬಂದು ಹೇಳಿದ್ದೇ ನಂದರೆ--
13ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ,
14ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ