ಯೆಹೋಶುವ 10:15

ತರುವಾಯ ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿದನು.

ಸಂದರ್ಭದೊಂದಿಗೆ ಓದಿ · ಯೆಹೋಶುವ 10

13ಆದದರಿಂದ ಜನಾಂಗವು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ಮಾಡುವ ವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರಿನ ಪುಸ್ತಕದಲ್ಲಿ ಬರೆದಿರ ಲಿಲ್ಲವೋ? ಹಾಗೆಯೇ ಸೂರ್ಯನು ಅಸ್ತಮಿಸಲು ತ್ವರೆಮಾಡದೆ ಹೆಚ್ಚುಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿದ್ದನು.

14ಕರ್ತನು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥಾ ಆ ದಿನಕ್ಕೆ ಸಮಾನ ವಾದ ದಿನವು ಪೂರ್ವದಲ್ಲಿಯೂ ಇಲ್ಲ, ಮುಂದೆಯೂ ಇಲ್ಲ; ಯಾಕಂದರೆ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದನು.

15ತರುವಾಯ ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿದನು.

16ಆದರೆ ಆ ಐದು ಮಂದಿ ಅರಸುಗಳು ಓಡಿಹೋಗಿ ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡರು.

17ಆ ಐದು ಮಂದಿ ಅರಸುಗಳು ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡವರಾಗಿ ಸಿಕ್ಕಿದರೆಂದು ಯೆಹೋಶುವನಿಗೆ ತಿಳಿಸಲ್ಪಟ್ಟಿತು.

ಯೆಹೋಶುವ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी