ಲೂಕನು 14:19

ಬೇರೊಬ್ಬನು-- ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿ ದ್ದೇನೆ, ಅವುಗಳನ್ನು ಪರೀಕ್ಷಿಸುವದಕ್ಕಾಗಿ ಹೋಗುತ್ತೇನೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.

ಸಂದರ್ಭದೊಂದಿಗೆ ಓದಿ · ಲೂಕನು 14

17ಔತಣದ ಸಮಯವಾದಾಗ ಕರೆಯಲ್ಪಟ್ಟವರಿಗೆ ಅವನು--ಎಲ್ಲವೂ ಸಿದ್ಧವಾಗಿದೆ, ಬನ್ನಿರಿ ಎಂದು ಹೇಳುವದಕ್ಕಾಗಿ ತನ್ನ ಸೇವಕನನ್ನು ಕಳುಹಿಸಿದನು.

18ಆದರೆ ಅವರೆಲ್ಲರೂ ಒಂದೇ ಮನ ಸ್ಸಿನಿಂದ ನೆವ ಹೇಳಲಾರಂಭಿಸಿ ಮೊದಲನೆಯವನು ಅವನಿಗೆ--ನಾನು ಒಂದು ತುಂಡು ಭೂಮಿಯನ್ನು ಕೊಂಡುಕೊಂಡಿದ್ದೇನೆ, ಹೋಗಿ ಅದನ್ನು ನೋಡುವದು ಅವಶ್ಯವಾಗಿದೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.

19ಬೇರೊಬ್ಬನು-- ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿ ದ್ದೇನೆ, ಅವುಗಳನ್ನು ಪರೀಕ್ಷಿಸುವದಕ್ಕಾಗಿ ಹೋಗುತ್ತೇನೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.

20ಇನ್ನೊಬ್ಬನು--ನಾನು ಒಬ್ಬಳನ್ನು ಮದುವೆ ಮಾಡಿಕೊಂಡಿದ್ದೇನೆ, ಅದಕೋಸ್ಕರ ನಾನು ಬರ ಲಾರೆನು ಅಂದನು.

21ಹೀಗೆ ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಿದನು. ಆಗ ಆ ಮನೇಯಜಮಾನನು ಕೋಪಗೊಂಡು ತನ್ನ ಸೇವಕನಿಗೆ--ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ ಬಡವರನ್ನೂ ಊನವಾದ ವರನ್ನೂ ಕುಂಟರನ್ನೂ ಕುರುಡರನ್ನೂ ಇಲ್ಲಿ ಒಳಗೆ ಕರಕೆ

ಲೂಕನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी