ಪ್ರಕಟನೆ 21:13

ಪೂರ್ವ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲು ಗಳು. ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 21

11ಅದರಲ್ಲಿ ದೇವರ ಮಹಿಮೆ ಇತ್ತು; ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು; ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು.

12ಆ ಪಟ್ಟಣಕ್ಕೆ ಬಹಳ ಎತ್ತರವಾದ ಗೋಡೆ ಇತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲು ಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೂತರಿದ್ದರು; ಅವುಗಳ ಮೇಲೆ ಇಸ್ರಾ ಯೇಲ್ಯರ ಹನ್ನೆರಡು ಗೋತ್ರಗಳ ಹೆಸರುಗಳು ಬರೆ ದಿದ್ದವು.

13ಪೂರ್ವ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲು ಗಳು. ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು.

14ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.

15ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.

ಪ್ರಕಟನೆ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी