ಮಾರ್ಕನು 5:6

ಆದರೆ ಅವನು ದೂರದಿಂದ ಯೇಸುವನ್ನು ನೋಡಿದಾಗ ಓಡಿಬಂದು ಆತನನ್ನು ಆರಾಧಿಸಿ --

ಸಂದರ್ಭದೊಂದಿಗೆ ಓದಿ · ಮಾರ್ಕನು 5

4ಯಾಕಂದರೆ ಅನೇಕ ಸಾರಿ ಅವನನ್ನು ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿ ಗಳನ್ನು ಕಿತ್ತುಹಾಕಿ ಬೇಡಿಗಳನ್ನು ಮುರಿದು ತುಂಡು ಮಾಡುತ್ತಿದ್ದದ್ದರಿಂದ ಯಾವ ಮನುಷ್ಯನೂ ಅವನನ್ನು ಹತೋಟಿಗೆ ತರಲಾರದೆ ಇದ್ದನು.

5ಅವನು ರಾತ್ರಿ ಹಗಲು ಯಾವಾಗಲೂ ಬೆಟ್ಟಗಳಲ್ಲಿಯೂ ಸಮಾಧಿಗಳ ಲ್ಲಿಯೂ ಕೂಗುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಕೊಯ್ದುಕೊಳ್ಳುತ್ತಿದ್ದನು.

6ಆದರೆ ಅವನು ದೂರದಿಂದ ಯೇಸುವನ್ನು ನೋಡಿದಾಗ ಓಡಿಬಂದು ಆತನನ್ನು ಆರಾಧಿಸಿ --

7ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.

8ಯಾಕಂದರೆ ಆತನು ಅವ ನಿಗೆ--ಅಶುದ್ಧಾತ್ಮವೇ, ಆ ಮನುಷ್ಯನೊಳಗಿನಿಂದ ಹೊರಗೆ ಬಾ ಎಂದು ಹೇಳಿದ್ದನು.

ಮಾರ್ಕನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी