ಯಾಜಕಕಾಂಡ 14:49

ಆ ಮನೆ ಯನ್ನು ಶುದ್ಧಪಡಿಸುವದಕ್ಕೊಸ್ಕರ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 14

47ಆ ಮನೆಯೊಳಗೆ ಮಲಗಿಕೊಳ್ಳುವ ವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು, ಅಲ್ಲದೆ ಆ ಮನೆಯೊಳಗೆ ತಿನ್ನುವವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು.

48ಆದರೆ ಯಾಜಕನು ಒಳಗೆ ಬಂದು ಅದನ್ನು ನೋಡಿದಾಗ ಇಗೋ, ಗಿಲಾವು ಮಾಡಿದ ನಂತರ ಆ ಮನೆಯಲ್ಲಿ ಆ ವ್ಯಾಧಿಯು ಹರಡಿಕೊಂಡಿರದಿದ್ದರೆ ಆ ಮನೆಯು ಶುದ್ಧವೆಂದು ಯಾಜಕನು ನಿರ್ಣಯಿಸ ಬೇಕು. ಆ ವ್ಯಾಧಿಯು ಸ್ವಸ್ಥವಾಯಿತು.

49ಆ ಮನೆ ಯನ್ನು ಶುದ್ಧಪಡಿಸುವದಕ್ಕೊಸ್ಕರ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು.

50ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಒಂದು ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು.

51ತರುವಾಯ ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರ ವನ್ನೂ ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು ಅವುಗಳನ್ನು ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ ಏಳುಸಾರಿ ಆ ಮನೆಗೆ ಚಿಮುಕಿಸಬೇಕು.

ಯಾಜಕಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी