ಯೋಹಾನನು 19:8

ಪಿಲಾತನು ಈ ಮಾತನ್ನು ಕೇಳಿದಾಗ ಇನ್ನೂ ಬಹಳವಾಗಿ ಭಯಪಟ್ಟನು.

ಸಂದರ್ಭದೊಂದಿಗೆ ಓದಿ · ಯೋಹಾನನು 19

6ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.

7ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.

8ಪಿಲಾತನು ಈ ಮಾತನ್ನು ಕೇಳಿದಾಗ ಇನ್ನೂ ಬಹಳವಾಗಿ ಭಯಪಟ್ಟನು.

9ತಿರಿಗಿ ನ್ಯಾಯಾಲಯ ದೊಳಗೆ ಹೋಗಿ ಯೇಸುವಿಗೆ--ನೀನು ಎಲ್ಲಿಂದ ಬಂದವನು ಎಂದು ಆತನನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.

10ಆಗ ಪಿಲಾತನು ಆತನಿಗೆ--ನೀನು ನನ್ನ ಸಂಗಡ ಮಾತ ನಾಡುವದಿಲ್ಲವೋ? ನಾನು ನಿನ್ನನ್ನು ಶಿಲುಬೆಗೆ ಹಾಕಿಸುವದಕ್ಕೂ ನಿನ್ನನ್ನು ಬಿಡಿಸುವದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯುವದಿಲ್ಲವೋ ಎಂದು ಕೇಳಿದನು.

ಯೋಹಾನನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी