ದಾನಿಯೇಲನು 2:5

ಅರಸನು ಕಸ್ದೀ ಯರಿಗೆ ಪ್ರತ್ಯುತ್ತರವಾಗಿ--ಆ ಕನಸಿನ ಸಂಗತಿಯು ನನ್ನನ್ನು ಬಿಟ್ಟು ಹೋಯಿತು; ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ ನೀವು ತುಂಡು ತುಂಡಾಗಿ ಕತ್ತರಿಸಲ್ಪಡುವಿರಿ; ನಿಮ್ಮ ಮನೆಗಳು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 2

3ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಆ ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು.

4ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.

5ಅರಸನು ಕಸ್ದೀ ಯರಿಗೆ ಪ್ರತ್ಯುತ್ತರವಾಗಿ--ಆ ಕನಸಿನ ಸಂಗತಿಯು ನನ್ನನ್ನು ಬಿಟ್ಟು ಹೋಯಿತು; ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ ನೀವು ತುಂಡು ತುಂಡಾಗಿ ಕತ್ತರಿಸಲ್ಪಡುವಿರಿ; ನಿಮ್ಮ ಮನೆಗಳು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.

6ಆದರೆ ನೀವು ಕನ ಸನ್ನೂ ಅದರ ಅರ್ಥಗಳನ್ನೂ ತಿಳಿಸಿದರೆ, ದಾನಗಳನ್ನೂ ಬಹುಮಾನಗಳನ್ನೂ ಬಹಳ ಘನವನ್ನೂ ನನ್ನಿಂದ ಪಡೆಯುವಿರಿ; ಹೀಗಿರಲಾಗಿ ಕನಸನ್ನೂ ಅದರ ಅಭಿ ಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಿದನು.

7ಅವರು ಮತ್ತೆ ಉತ್ತರವಾಗಿ--ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ, ಆಗ ಅದರ ಅರ್ಥವನ್ನು ನಾವು ತಿಳಿಸುವೆವು ಅಂದರು.

ದಾನಿಯೇಲನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी