೨ ಪೇತ್ರನು 2:16

ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.

ಸಂದರ್ಭದೊಂದಿಗೆ ಓದಿ · ೨ ಪೇತ್ರನು 2

14ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.

15ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.

16ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.

17ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.

18ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.

೨ ಪೇತ್ರನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी