ಆದರೆ ಕರ್ತನ ದೂತನು ಅವನಿಗೆ--ನನ್ನ ಹೆಸರು ಏನೆಂದು ನೀನು ಕೇಳುವದೇನು? ಆ ಹೆಸರು ರಹಸ್ಯವಾದದ್ದು ಅಂದನು.
16ಕರ್ತನ ದೂತನು ಮಾನೋಹನಿಗೆ--ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ರೊಟ್ಟಿಯನ್ನು ತಿನ್ನುವ ದಿಲ್ಲ; ನೀನು ದಹನಬಲಿಯನ್ನು ಅರ್ಪಿಸಿದರೆ ಅದನ್ನು ಕರ್ತನಿಗೆ ಅರ್ಪಿಸಬೇಕು ಅಂದನು.
17ಅವನು ಕರ್ತನ ದೂತನೆಂದು ಮಾನೋಹನು ಅರಿಯದೆ ಇದ್ದನು. ಮಾನೋಹನು ಕರ್ತನ ದೂತನಿಗೆ--ನೀನು ಹೇಳಿದ ಮಾತುಗಳು ನೆರವೇರುವಾಗ ನಾವು ನಿನ್ನನ್ನು ಘನ ಪಡಿಸುವ ಹಾಗೆ ನಿನ್ನ ಹೆಸರೇನು ಅಂದನು.
18ಆದರೆ ಕರ್ತನ ದೂತನು ಅವನಿಗೆ--ನನ್ನ ಹೆಸರು ಏನೆಂದು ನೀನು ಕೇಳುವದೇನು? ಆ ಹೆಸರು ರಹಸ್ಯವಾದದ್ದು ಅಂದನು.
19ಹೀಗೆ ಮಾನೋಹನು ಮೇಕೆಯ ಮರಿಯನ್ನೂ ಅರ್ಪಣೆಯನ್ನೂ ತಂದು ಅವುಗಳನ್ನು ಬಂಡೆಯ ಮೇಲೆ ಕರ್ತನಿಗೆ ಅರ್ಪಿಸಿದನು. ಮಾನೋ ಹನೂ ಅವನ ಹೆಂಡತಿಯೂ ನೋಡುವಾಗ ಕರ್ತನ ದೂತನು ಆಶ್ಚರ್ಯವಾದದ್ದನ್ನು ಮಾಡಿದನು.
20ಅಗ್ನಿ ಜ್ವಾಲೆಯು ಬಲಿಪೀಠದಿಂದ ಆಕಾಶಕ್ಕೆ ಸರಿಯಾಗಿ ಏಳು ವಾಗ ಏನಾಯಿತಂದರೆ, ಕರ್ತನ ದೂತನು ಬಲಿಪೀಠದ ಜ್ವಾಲೆಯಲ್ಲಿ ಮೇಲಕ್ಕೆ ಹೋದನು. ಅದನ್ನು ಮಾನೋ ಹನೂ ಅವನ ಹೆಂಡತಿಯೂ ನೋಡಿ ನೆಲದ ಮೇಲೆ ಬೋರಲು ಬಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ