ಯೆಶಾಯ 59:12

ಯಾಕಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ; ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ದ್ರೋಹಗಳು ನಮ್ಮ ಸಂಗಡ ಅವೆ; ನಮ್ಮ ಅಕ್ರಮಗಳ ನ್ನಾದರೋ, ನಾವು ಬಲ್ಲೆವು.

ಸಂದರ್ಭದೊಂದಿಗೆ ಓದಿ · ಯೆಶಾಯ 59

10ಕುರುಡರ ಹಾಗೆ ಗೋಡೆಯನ್ನು ತಡವರಿ ಸುತ್ತೇವೆ; ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ; ಮಧ್ಯಾಹ್ನದಲ್ಲಿ, ರಾತ್ರಿಯ ಹಾಗೆ ಎಡವುತ್ತೇವೆ, ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ.

11ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ; ಪಾರಿವಾಳಗಳ ಹಾಗೆ ಬಹಳವಾಗಿ ಮೂಲ್ಗುತ್ತೇವೆ; ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ, ಆದರೆ ಅದು ಇಲ್ಲವೇ ಇಲ್ಲ; ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.

12ಯಾಕಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ; ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ದ್ರೋಹಗಳು ನಮ್ಮ ಸಂಗಡ ಅವೆ; ನಮ್ಮ ಅಕ್ರಮಗಳ ನ್ನಾದರೋ, ನಾವು ಬಲ್ಲೆವು.

13ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.

14ನ್ಯಾಯವು ಸಹ ಹಿಂದಕ್ಕೆ ತಿರುಗಿ ಸಲ್ಪಟ್ಟಿದೆ. ನೀತಿಯು ದೂರದಲ್ಲಿ ನಿಲ್ಲುತ್ತದೆ; ಸತ್ಯವು ಬೀದಿಯಲ್ಲಿ ಬಿದ್ದುಹೋಯಿತು. ಯಥಾರ್ಥತೆಯು ಪ್ರವೇಶಿಸುವದೇ ಇಲ್ಲ.

ಯೆಶಾಯ 59 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी