ಈಗ ಓ ಕರ್ತನಾದ ದೇವರೇ, ನೀನೇ ದೇವರಾದಾತನು, ನಿನ್ನ ವಾಕ್ಯಗಳು ಸತ್ಯವು; ನಿನ್ನ ದಾಸನಿಗೆ ಈ ಒಳ್ಳೇದನ್ನು ವಾಗ್ದಾನಮಾಡಿದಿ.
26ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ.
27ಸೈನ್ಯ ಗಳ ಓ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಈ ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು.
28ಈಗ ಓ ಕರ್ತನಾದ ದೇವರೇ, ನೀನೇ ದೇವರಾದಾತನು, ನಿನ್ನ ವಾಕ್ಯಗಳು ಸತ್ಯವು; ನಿನ್ನ ದಾಸನಿಗೆ ಈ ಒಳ್ಳೇದನ್ನು ವಾಗ್ದಾನಮಾಡಿದಿ.
29ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ