ಉದಯದಲ್ಲಿ ಯೋನಾತಾನನು ದಾವೀದನಿಗೆ ನೇಮಿಸಿದ ವೇಳೆಯ ಪ್ರಕಾರವೇ ಒಬ್ಬ ಚಿಕ್ಕ ಹುಡುಗ ನನ್ನು ಕರಕೊಂಡು ಹೊಲಕ್ಕೆ ಹೋಗಿ
33ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು.
34ಕೋಪದ ಉರಿಯಿಂದ ಆಗ ಯೋನಾತಾನನು ಮೇಜಿನಿಂದ ಎದ್ದುಹೋಗಿ ತಿಂಗಳಿನ ಎರಡನೇ ದಿವಸದಲ್ಲಿ ಊಟಮಾಡಲಿಲ್ಲ. ತನ್ನ ತಂದೆಯು ದಾವೀದನಿಗೆ ಅವಮಾನ ಮಾಡಿದ್ದ ರಿಂದ ಅವನಿಗೋಸ್ಕರ ವ್ಯಥೆಪಟ್ಟನು.
35ಉದಯದಲ್ಲಿ ಯೋನಾತಾನನು ದಾವೀದನಿಗೆ ನೇಮಿಸಿದ ವೇಳೆಯ ಪ್ರಕಾರವೇ ಒಬ್ಬ ಚಿಕ್ಕ ಹುಡುಗ ನನ್ನು ಕರಕೊಂಡು ಹೊಲಕ್ಕೆ ಹೋಗಿ
36ಹುಡುಗನಿಗೆ--ನೀನು ಓಡಿಹೋಗಿ ನಾನು ಹಾಕುವ ಬಾಣ ಗಳನ್ನು ಹುಡುಕಿಕೊಂಡು ಬಾ ಎಂದು ಹೇಳಿ, ಆ ಹುಡುಗನು ಓಡುವಾಗ ಅವನಿಗೆ ಆಚೆ ಹೋಗುವ ಹಾಗೆ ಬಾಣವನ್ನು ಎಸೆದನು.
37ಯೋನಾತಾನನು ಹಾಕಿದ ಬಾಣಬಿದ್ದ ಸ್ಥಳದ ವರೆಗೆ ಹುಡುಗನು ಹೋದಾಗ--ಬಾಣವು ನಿನಗೆ ಆಚೆ ಇಲ್ಲವೋ ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ