೧ ಪೇತ್ರನು 2:22

ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.

ಸಂದರ್ಭದೊಂದಿಗೆ ಓದಿ · ೧ ಪೇತ್ರನು 2

20ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.

21ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.

22ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.

23ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.

24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.

೧ ಪೇತ್ರನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी