ಓ ಕರ್ತನೇ, ಅವರಿಗೆ ಕೊಡು; ಅವರಿಗೆ ನೀನು ಏನು ಕೊಡುತ್ತೀ? ಗರ್ಭಸ್ರಾವವನ್ನು ಮಾಡು ಮತ್ತು ಬತ್ತಿದ ಸ್ತನಗಳನ್ನು ಅವರಿಗೆ ಕೊಡು.
12ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!
13ನಾನು ತೂರನ್ನು ನೊಡಿದಂತೆ ಎಫ್ರಾಯಾಮು ರಮ್ಯ ಸ್ಥಳದಲ್ಲಿ ನೆಡಲ್ಪಟ್ಟಿದೆ; ಆದರೆ ಎಫ್ರಾಯಾಮು ಕೊಲ್ಲುವವನಿಗೆ ತನ್ನ ಮಕ್ಕಳನ್ನು ಹೊರಗೆ ತರುವದು.
14ಓ ಕರ್ತನೇ, ಅವರಿಗೆ ಕೊಡು; ಅವರಿಗೆ ನೀನು ಏನು ಕೊಡುತ್ತೀ? ಗರ್ಭಸ್ರಾವವನ್ನು ಮಾಡು ಮತ್ತು ಬತ್ತಿದ ಸ್ತನಗಳನ್ನು ಅವರಿಗೆ ಕೊಡು.
15ಅವರ ಕೆಟ್ಟತನ ವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ನಾನು ಅವರನ್ನು ಹಗೆ ಮಾಡಿದ್ದೇನೆ. ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ ಅವ ರನ್ನು ಇನ್ನು ಪ್ರೀತಿಮಾಡುವದೇ ಇಲ್ಲ; ಅವರ ಪ್ರಭು ಗಳೆಲ್ಲಾ ತಿರುಗಿ ಬೀಳುವವರೇ.
16ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ