ಅರಣ್ಯಕಾಂಡ 5:19

ಆಗ ಯಾಜಕನು ಅವಳನ್ನು ಪ್ರಮಾಣಮಾಡಿಸಿ ಹೇಳಬೇಕಾದದ್ದು: ಒಬ್ಬ ಮನುಷ್ಯನು ನಿನ್ನ ಸಂಗಡ ಮಲಗದೆ ನೀನು ಅಪವಿತ್ರಳಾಗಿ ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡದೆ ಇದ್ದರೆ ಶಪಿಸುವ ಈ ಕಹಿಯಾದ ನೀರಿಗೆ ನಿರಪರಾಧಿಯಾಗು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 5

17ಆಗ ಯಾಜಕನು ಪವಿತ್ರ ವಾದ ನೀರನ್ನು ಮಣ್ಣಿನ ಗಡಿಗೆಗಳಲ್ಲಿ ತೆಗೆದು ಕೊಳ್ಳಬೇಕು; ಗುಡಾರದ ನೆಲದಲ್ಲಿರುವ ಧೂಳನ್ನು ಯಾಜಕನು ತಕ್ಕೊಂಡು ಆ ನೀರಿನೊಳಗೆ ಹಾಕಬೇಕು.

18ಯಾಜಕನು ಆ ಸ್ತ್ರೀಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಿ ಆಕೆಯ ತಲೆಯ ಮೇಲಿರುವ ಮುಸುಕನ್ನು ತೆಗೆದು ಅವಳ ಕೈಗಳಲ್ಲಿ ರೋಷದ ಕಾಣಿಕೆಯಾಗಿರುವ ಜ್ಞಾಪಕದ ಕಾಣಿಕೆಯನ್ನು ಇಡಬೇಕು. ಆದರೆ ಯಾಜಕನ ಕೈಯಲ್ಲಿ ಶಪಿಸುವಂತ ಕಹಿಯಾದ ನೀರು ಇರಬೇಕು.

19ಆಗ ಯಾಜಕನು ಅವಳನ್ನು ಪ್ರಮಾಣಮಾಡಿಸಿ ಹೇಳಬೇಕಾದದ್ದು: ಒಬ್ಬ ಮನುಷ್ಯನು ನಿನ್ನ ಸಂಗಡ ಮಲಗದೆ ನೀನು ಅಪವಿತ್ರಳಾಗಿ ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡದೆ ಇದ್ದರೆ ಶಪಿಸುವ ಈ ಕಹಿಯಾದ ನೀರಿಗೆ ನಿರಪರಾಧಿಯಾಗು.

20ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನು ನಿನ್ನ ಸಂಗಡ ಮಲಗಿದ್ದರೆ

21ಯಾಜಕನು ಶಾಪದ ಪ್ರಮಾಣ ದಿಂದ ಆ ಸ್ತ್ರೀಗೆ ಹೇಳಬೇಕಾದದ್ದೇನಂದರೆ--ಕರ್ತನು ನಿನ್ನ ತೊಡೆಯನ್ನು ಕ್ಷೀಣವಾಗುವಂತೆಯೂ ನಿನ್ನ ಹೊಟ್ಟೆಯನ್ನು ಉಬ್ಬುವಂತೆಯೂ ಮಾಡುವದರಿಂದ ಕರ್ತನು ನಿನ್ನನ್ನು ನಿನ್ನ ಜನರೊಳಗೆ ಶಾಪವನ್ನಾಗಿಯೂ ದೂಷಣೆಯನ್ನಾಗಿಯೂ ಇಡಲಿ.

ಅರಣ್ಯಕಾಂಡ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी