೨ ಸಮುವೇಲನು 19:15

ಅರಸನು ತಿರಿಗಿ ಯೊರ್ದನಿನ ವರೆಗೂ ಬಂದಾಗ ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವದಕ್ಕೆ ಗಿಲ್ಗಾಲಿಗೆ ಬಂದರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 19

13ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.

14ಹಾಗೆಯೇ ಅವನು ಸಕಲ ಯೆಹೂದ ಜನರ ಹೃದಯವನ್ನು ಒಬ್ಬನ ಹೃದಯದ ಹಾಗೆ ಬೊಗ್ಗಿಸಿ ದ್ದರಿಂದ ಅವರು ಅರಸನಿಗೆ--ನೀನೂ ನಿನ್ನ ಎಲ್ಲಾ ಸೇವಕರೂ ತಿರಿಗಿ ಬನ್ನಿರಿ ಎಂದು ಹೇಳಿ ಕಳುಹಿಸಿದರು.

15ಅರಸನು ತಿರಿಗಿ ಯೊರ್ದನಿನ ವರೆಗೂ ಬಂದಾಗ ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವದಕ್ಕೆ ಗಿಲ್ಗಾಲಿಗೆ ಬಂದರು.

16ಇದಲ್ಲದೆ ಬಹುರೀಮಿನವನೂ ಬೆನ್ಯಾವಿಾನ್ಯನೂ ಗೇರನ ಮಗನಾದ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸನಾದ ದಾವೀದನನ್ನು ಎದುರು ಗೊಳ್ಳುವದಕ್ಕೆ ಬಂದನು.

17ಅವನ ಸಂಗಡ ಸಾವಿರ ಮಂದಿ ಬೆನ್ಯಾವಿಾನ್ಯರಿದ್ದರು. ಸೌಲನ ಮನೆಯ ಸೇವಕ ನಾದ ಚೀಬನೂ ಅವನ ಸಂಗಡ ತನ್ನ ಹದಿನೈದು ಮಂದಿ ಕುಮಾರರೂ ತನ್ನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ ಅರಸನಿಗೆ ಎದುರಾಗಿ ಬಂದರು.

೨ ಸಮುವೇಲನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी