ಇದಾದ ಮೇಲೆ ಯೇಸು ಹಿಂತಿರುಗಿದಾಗ ಜನರು ಆತನನ್ನು ಸಂತೋಷದಿಂದ ಅಂಗೀಕರಿಸಿದರು; ಯಾಕಂದರೆ ಅವರೆಲ್ಲರು ಆತನಿಗಾಗಿ ಕಾಯುತ್ತಿದ್ದರು.
38ಆಗ ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ತಾನು ಆತನ ಜೊತೆಯಲ್ಲಿ ಇರುವೆನೆಂದು ಆತನನ್ನು ಬೇಡಿಕೊಂಡನು. ಆದರೆ ಯೇಸು ಅವನನ್ನು ಕಳುಹಿಸಿಬಿಟ್ಟು ಅವನಿಗೆ--
39ನೀನು ನಿನ್ನ ಸ್ವಂತ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥಾ ಮಹತ್ವವಾದವುಗಳನ್ನು ಮಾಡಿದ್ದಾನೆಂಬದನ್ನು ತೋರಿಸು ಅಂದನು. ಅವನು ತನ್ನ ಮಾರ್ಗವಾಗಿ ಹೊರಟು ಯೇಸು ತನಗೆ ಎಂಥಾ ದೊಡ್ಡ ಕಾರ್ಯಗಳನ್ನು ಮಾಡಿದ್ದಾನೆಂದು ಪಟ್ಟಣದಲ್ಲೆಲಾ ಪ್ರಚಾರಮಾಡಿದನು.
40ಇದಾದ ಮೇಲೆ ಯೇಸು ಹಿಂತಿರುಗಿದಾಗ ಜನರು ಆತನನ್ನು ಸಂತೋಷದಿಂದ ಅಂಗೀಕರಿಸಿದರು; ಯಾಕಂದರೆ ಅವರೆಲ್ಲರು ಆತನಿಗಾಗಿ ಕಾಯುತ್ತಿದ್ದರು.
41ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.
42ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ