ಮಿಕ 3:4

ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.

ಸಂದರ್ಭದೊಂದಿಗೆ ಓದಿ · ಮಿಕ 3

2ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ,

3ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.

4ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.

5ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.

6ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು.

ಮಿಕ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी