ಧರ್ಮೋಪದೇಶಕಾಂಡ 11:16

ನಿಮ್ಮ ಹೃದಯವು ಮರುಳುಗೊಳ್ಳದ ಹಾಗೆಯೂ ನೀವು ಓರೆಯಾಗಿ ಹೋಗಿ ಬೇರೆ ದೇವರುಗಳನ್ನು ಸೇವಿಸಿ ಅಡ್ಡಬೀಳದ ಹಾಗೆಯೂ

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 11

14ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.

15ನಿನ್ನ ಪಶುಗಳಿಗೆ ಹುಲ್ಲನ್ನು ನಿನ್ನ ಹೊಲದಲ್ಲಿ ಕೊಡುವೆನು; ನೀನು ತಿಂದು ತೃಪ್ತಿಯಾಗುವಿ.

16ನಿಮ್ಮ ಹೃದಯವು ಮರುಳುಗೊಳ್ಳದ ಹಾಗೆಯೂ ನೀವು ಓರೆಯಾಗಿ ಹೋಗಿ ಬೇರೆ ದೇವರುಗಳನ್ನು ಸೇವಿಸಿ ಅಡ್ಡಬೀಳದ ಹಾಗೆಯೂ

17ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ಮಳೆಯಾಗದಂತೆ ಮಾಡಿ ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡದ ಹಾಗೆಯೂ ಕರ್ತನು ನಮಗೆ ಕೊಡುವ ಆ ಉತ್ತಮ ದೇಶದಲ್ಲಿಂದ ನೀವು ಬೇಗ ನಾಶವಾಗದ ಹಾಗೆಯೂ ಎಚ್ಚರಿಕೆ ತಂದುಕೊಳ್ಳಿರಿ.

18ಆದದರಿಂದ ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ; ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ; ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ.

ಧರ್ಮೋಪದೇಶಕಾಂಡ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी