ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
14ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.
15ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.
16ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ