ಯೆರೆಮಿಯ 34:2

ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 34

1ಬಾಬೆಲಿನ ಅರಸನಾದ ನೆಬೂಕದ್ನೆಚ್ಚ ರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂ ದರೆ--

2ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು.

3ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.

4ಆದಾಗ್ಯೂ ಯೆಹೂದದ ಅರಸನಾದ ಚಿದ್ಕೀಯನೇ, ಕರ್ತನ ವಾಕ್ಯ ವನ್ನು ಕೇಳು. ಕರ್ತನು ಹೀಗೆ ಹೇಳುತ್ತಾನೆ--ನೀನು ಕತ್ತಿಯಿಂದ ಸಾಯುವದಿಲ್ಲ.

ಯೆರೆಮಿಯ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी