ವಿಮೋಚನಕಾಂಡ 7:17

ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 7

15ಬೆಳಿಗ್ಗೆ ಫರೋಹನ ಬಳಿಗೆ ಹೋಗು; ಇಗೋ, ಅವನು ಹೊರಗೆ ನೀರಿನ ಬಳಿಗೆ ಹೋಗುವನು. ನದೀತೀರದಲ್ಲಿ ಅವನೆದುರಿಗೆ ನಿಂತುಕೊಂಡು ಸರ್ಪವಾಗಿ ಮಾಡಲ್ಪಟ್ಟ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು

16ಅವನಿಗೆ ನೀನು--ಇಬ್ರಿಯರ ದೇವರಾದ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು ಎಂದು ಹೇಳಿದ್ದಾನೆ. ಆದರೆ ಇಗೋ, ಇಂದಿನ ವರೆಗೂ ನೀನು ಕೇಳಲಿಲ್ಲ.

17ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು.

18ನದಿಯ ಲ್ಲಿರುವ ವಿಾನುಗಳು ಸಾಯುವವು; ನದಿಯು ನಾರು ವದು. ಐಗುಪ್ತ್ಯರು ನದಿಯ ನೀರನ್ನು ಕುಡಿಯುವದಕ್ಕೆ ಅಸಹ್ಯಪಡುವರು ಎಂದು ಹೇಳು ಅಂದನು.

19ಕರ್ತನು ಮೋಶೆಗೆ--ನೀನು ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಐಗುಪ್ತದಲ್ಲಿರುವ ನೀರುಗಳ ಮೇಲೆಯೂ ನದಿ ಪ್ರವಾಹ ಕೆರೆ ಕೊಳ ಕುಂಟೆಗಳ ಮೇಲೆಯೂ ಕೈಚಾಚು ಎಂದು ಹೇಳು. ಆಗ ಅವು ರಕ್ತವಾಗುವವು; ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆ ಗಳಲ್ಲಾಗಲಿ ಕಲ್ಲಿನ ಪಾತ್ರೆಗಳಲ್ಲಾಗಲಿ ರಕ್ತವಿರುವದು ಎಂದು ಹೇಳಿದನು.

ವಿಮೋಚನಕಾಂಡ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी