ರೋಮಾಪುರದವರಿಗೆ 11:8

(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 11

6ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.

7ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.

8(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.

9ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ.

10ನೋಡದಂತೆ ಅವರ ಕಣ್ಣು ಗಳು ಮೊಬ್ಬಾಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರಲಿ ಎಂದು ಅನ್ನುತ್ತಾನೆ.

ರೋಮಾಪುರದವರಿಗೆ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी