ಯೋಹಾನನು 8:24

ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಯೋಹಾನನು 8

22ಅದಕ್ಕೆ ಯೆಹೂದ್ಯರು--ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿ ದ್ದಾನೋ? ಯಾಕಂದರೆ--ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳುತ್ತಾನಲ್ಲಾ ಅಂದರು.

23ಆತನು ಅವರಿಗೆ--ನೀವು ಕೆಳಗಿನವರು, ನಾನು ಮೇಲಿನವನು; ನೀವು ಈ ಲೋಕದವರು, ನಾನು ಈ ಲೋಕದವನಲ್ಲ.

24ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.

25ತರುವಾಯ ಅವರು ಆತನಿಗೆ--ನೀನು ಯಾರಾಗಿದ್ದೀ ಅಂದರು. ಅದಕ್ಕೆ ಯೇಸು ಅವರಿಗೆ--ಮೊದಲಿನಿಂದಲೂ ನಾನು ನಿಮಗೆ ಹೇಳಿದಂತವನೇ.

26ನಿಮ್ಮ ವಿಷಯವಾಗಿ ಹೇಳುವದಕ್ಕೂ ತೀರ್ಪುಮಾಡುವದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದಾತನು ಸತ್ಯವಂತನು. ನಾನು ಆತನಿಂದ ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.

ಯೋಹಾನನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी