೧ ಸಮುವೇಲನು 15:18

ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 15

16ಆಗ ಸಮುವೇಲನು ಸೌಲನಿಗೆಅದಿರಲಿ ಕರ್ತನು ಈ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು ಅಂದನು. ಅದಕ್ಕವನು--ಹೇಳು ಅಂದನು.

17ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್‌ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?

18ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು.

19ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು.

20ಆಗ ಸೌಲನು ಸಮುವೇಲನಿಗೆ--ಹೌದು, ನಾನು ಕರ್ತನ ಮಾತಿಗೆ ವಿಧೇಯನಾಗಿ, ಕರ್ತನು ನನ್ನನ್ನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು.

೧ ಸಮುವೇಲನು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी