ಲೂಕನು 2:46

ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.

ಸಂದರ್ಭದೊಂದಿಗೆ ಓದಿ · ಲೂಕನು 2

44ಆದರೆ ಆತನು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿ ಚಯವಾದವರಲ್ಲಿಯೂ ಆತನನ್ನು ಹುಡುಕಿದರು.

45ಆದರೆ ಅವರು ಆತನನ್ನು ಕಂಡುಕೊಳ್ಳದೆ ಹೋದ ದರಿಂದ ಆತನನ್ನು ಹುಡುಕುತ್ತಾ ಮತ್ತೆ ಯೆರೂಸ ಲೇಮಿಗೆ ಹಿಂತಿರುಗಿ ಬಂದರು.

46ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.

47ಆತನು ಆಡಿದ ಮಾತುಗಳನ್ನು ಕೇಳಿದ ವರೆಲ್ಲರು ಆತನ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾ ದರು.

48ಅವರು (ತಂದೆ ತಾಯಿಗಳು) ಆತನನ್ನು ನೋಡಿದಾಗ ಆಶ್ಚರ್ಯಪಟ್ಟರು; ಆಗ ಆತನ ತಾಯಿಯು ಆತನಿಗೆ--ಮಗನೇ, ನೀನು ನಮಗೆ ಹೀಗೇಕೆ ಮಾಡಿದಿ? ಇಗೋ, ನಿನ್ನ ತಂದೆಯೂ ನಾನೂ ವ್ಯಥೆಯಿಂದ ನಿನ್ನನ್ನು ಹುಡುಕಿದೆವು ಅಂದಳು.

ಲೂಕನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी