ಯೆಶಾಯ 29:7

ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧ ವಾಗಿ ಯುದ್ಧ ಮಾಡಿ ಬಾಧಿಸುವ ಸಕಲ ಜನಾಂಗಗಳ ಗುಂಪು ರಾತ್ರಿಯ ದರ್ಶನದ ಕನಸಿನಂತೆ ಮಾಯ ವಾಗುವದು.

ಸಂದರ್ಭದೊಂದಿಗೆ ಓದಿ · ಯೆಶಾಯ 29

5ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು.

6ಸೈನ್ಯಗಳ ಕರ್ತನ ಕಡೆಯಿಂದಲೇ ನೀನು ಗುಡುಗಿನಿಂದಲೂ ಮಹಾಶಬ್ದದಿಂದಲೂ ಬಿರುಗಾಳಿ, ಸುಳಿಗಾಳಿಯಿಂದಲೂ ದಹಿಸುವ ಅಗ್ನಿಜ್ವಾಲೆಯಿಂದ ಲೂ ವಿಚಾರಿಸಲ್ಪಡುವಿ.

7ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧ ವಾಗಿ ಯುದ್ಧ ಮಾಡಿ ಬಾಧಿಸುವ ಸಕಲ ಜನಾಂಗಗಳ ಗುಂಪು ರಾತ್ರಿಯ ದರ್ಶನದ ಕನಸಿನಂತೆ ಮಾಯ ವಾಗುವದು.

8ಹಸಿದ ಮನುಷ್ಯನು ಕನಸುಕಂಡು ಇಗೋ, ಉಣ್ಣುತ್ತಾನೆ ಆದರೆ ಅವನು ಎಚ್ಚತ್ತಾಗ ಪ್ರಾಣ ತುಂಬದ ಹಾಗೆಯೂ ಇಲ್ಲವೆ ಬಾಯಾರಿದ ವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತಾನೆ ಆದರೆ ಅವನು ಎಚ್ಚರವಾದಾಗ ಇಗೋ, ಬಲಹೀನನಾಗಿದ್ದು ಪ್ರಾಣ ಆಶಿಸುವ ಹಾಗೆಯೂ ಚೀಯೋನ್‌ ಪರ್ವ ತಕ್ಕೆ ವಿರೋಧವಾಗಿ ಯುದ್ಧಮಾಡುವ ಹಾಗೆಯೇ ಎಲ್ಲಾ ಜನಾಂಗಗಳ ಸಮೂಹವಿರುವದು.

9ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.

ಯೆಶಾಯ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी