ಯೋಹಾನನು 19:10

ಆಗ ಪಿಲಾತನು ಆತನಿಗೆ--ನೀನು ನನ್ನ ಸಂಗಡ ಮಾತ ನಾಡುವದಿಲ್ಲವೋ? ನಾನು ನಿನ್ನನ್ನು ಶಿಲುಬೆಗೆ ಹಾಕಿಸುವದಕ್ಕೂ ನಿನ್ನನ್ನು ಬಿಡಿಸುವದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯುವದಿಲ್ಲವೋ ಎಂದು ಕೇಳಿದನು.

ಸಂದರ್ಭದೊಂದಿಗೆ ಓದಿ · ಯೋಹಾನನು 19

8ಪಿಲಾತನು ಈ ಮಾತನ್ನು ಕೇಳಿದಾಗ ಇನ್ನೂ ಬಹಳವಾಗಿ ಭಯಪಟ್ಟನು.

9ತಿರಿಗಿ ನ್ಯಾಯಾಲಯ ದೊಳಗೆ ಹೋಗಿ ಯೇಸುವಿಗೆ--ನೀನು ಎಲ್ಲಿಂದ ಬಂದವನು ಎಂದು ಆತನನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.

10ಆಗ ಪಿಲಾತನು ಆತನಿಗೆ--ನೀನು ನನ್ನ ಸಂಗಡ ಮಾತ ನಾಡುವದಿಲ್ಲವೋ? ನಾನು ನಿನ್ನನ್ನು ಶಿಲುಬೆಗೆ ಹಾಕಿಸುವದಕ್ಕೂ ನಿನ್ನನ್ನು ಬಿಡಿಸುವದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯುವದಿಲ್ಲವೋ ಎಂದು ಕೇಳಿದನು.

11ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.

12ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.

ಯೋಹಾನನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी