ಧರ್ಮೋಪದೇಶಕಾಂಡ 26:13

ಆಗ ನೀನು ನಿನ್ನ ದೇವರಾದ ಕರ್ತನ ಮುಂದೆ--ನಾನು ಪರಿಶುದ್ಧವಾದವುಗಳನ್ನು ನನ್ನ ಮನೆಯೊಳಗಿಂದ ತಕ್ಕೊಂಡು ನೀನು ನನಗೆ ಆಜ್ಞಾಪಿಸಿದ ಎಲ್ಲಾ ಆಜ್ಞೆಗಳ ಹಾಗೆಯೇ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಟ್ಟಿ ದ್ದೇನೆ; ನಿನ್ನ ಆಜ್ಞೆಗಳನ್ನು ವಿಾರಲಿಲ್ಲ, ಮರೆಯಲಿಲ್ಲ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 26

11ನಿನ್ನ ದೇವರಾದ ಕರ್ತನು ನಿನಗೂ ನಿನ್ನ ಮನೆಗೂ ಕೊಡುವ ಎಲ್ಲಾ ಒಳ್ಳೆ ವಸ್ತುಗಳಲ್ಲಿ ನೀನೂ ಲೇವಿಯರೂ ನಿನ್ನ ಸಂಗಡ ಇರುವ ಪರವಾಸಿಯೂ ಸಂತೋಷಪಡಬೇಕು.

12ಹತ್ತನೆಯ ಪಾಲನ್ನು ಕೊಡುವ ವರುಷವಾಗಿರುವ ಮೂರನೆಯ ವರುಷದಲ್ಲಿ ನೀನು ನಿನ್ನ ಎಲ್ಲಾ ಹುಟ್ಟು ವಳಿಯ ಹತ್ತನೇ ಪಾಲನ್ನು ಕೊಟ್ಟು ತೀರಿಸಿದ ಮೇಲೆ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಡಬೇಕು; ಅವನು ನಿನ್ನ ಬಾಗಲುಗಳಲ್ಲಿ ತಿಂದು ತೃಪ್ತಿ ಹೊಂದಲಿ.

13ಆಗ ನೀನು ನಿನ್ನ ದೇವರಾದ ಕರ್ತನ ಮುಂದೆ--ನಾನು ಪರಿಶುದ್ಧವಾದವುಗಳನ್ನು ನನ್ನ ಮನೆಯೊಳಗಿಂದ ತಕ್ಕೊಂಡು ನೀನು ನನಗೆ ಆಜ್ಞಾಪಿಸಿದ ಎಲ್ಲಾ ಆಜ್ಞೆಗಳ ಹಾಗೆಯೇ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಟ್ಟಿ ದ್ದೇನೆ; ನಿನ್ನ ಆಜ್ಞೆಗಳನ್ನು ವಿಾರಲಿಲ್ಲ, ಮರೆಯಲಿಲ್ಲ.

14ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.

15ಆಕಾಶದೊಳಗಿಂದ, ನಿನ್ನ ಪರಿಶುದ್ಧ ನಿವಾಸದೊ ಳಗಿಂದ ಕಣ್ಣಿಡು; ನಿನ್ನ ಜನರಾದ ಇಸ್ರಾಯೇಲನ್ನೂ ನೀನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ಪ್ರಕಾರ ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ದೇಶವಾಗಿರುವಂಥ ದೇಶವನ್ನೂ ಆಶೀರ್ವದಿಸು ಎಂದು ಹೇಳಬೇಕು.

ಧರ್ಮೋಪದೇಶಕಾಂಡ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी