ಆತನ ಕೀರ್ತಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು.
35ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು.
36ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
37ಆತನ ಕೀರ್ತಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು.
38ತರುವಾಯ ಆತನು ಸಭಾಮಂದಿರದಿಂದ ಎದ್ದು ಸೀಮೋನನ ಮನೆಯಲ್ಲಿ ಪ್ರವೇಶಿಸಿದನು; ಅಲ್ಲಿ ಸೀಮೋನನ ಹೆಂಡತಿಯ ತಾಯಿಗೆ ಕಠಿಣ ಜ್ವರವಿದ್ದದ ರಿಂದ ಅವರು ಆಕೆಗೋಸ್ಕರ ಆತನನ್ನು ಬೇಡಿಕೊಂಡರು.
39ಆಗ ಆತನು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟಿತು; ಕೂಡಲೆ ಆಕೆಯು ಎದ್ದು ಅವರನ್ನು ಉಪಚರಿಸಿದಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ