ಯೆಹೆಜ್ಕೇಲನು 33:9

ಆದಾಗ್ಯೂ ನೀನು ಒಂದು ವೇಳೆ ದುಷ್ಟನನ್ನು ಅವನ ದುಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತನ್ನ ದುಷ್ಟಮಾರ್ಗದಿಂದ ತಿರುಗದಿದ್ದರೆ ಅವನ ಅಕ್ರಮಗಳಲ್ಲಿಯೇ ಸಾಯುವನು; ಆದರೆ ನೀನು ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಿ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 33

7ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು.

8ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು.

9ಆದಾಗ್ಯೂ ನೀನು ಒಂದು ವೇಳೆ ದುಷ್ಟನನ್ನು ಅವನ ದುಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತನ್ನ ದುಷ್ಟಮಾರ್ಗದಿಂದ ತಿರುಗದಿದ್ದರೆ ಅವನ ಅಕ್ರಮಗಳಲ್ಲಿಯೇ ಸಾಯುವನು; ಆದರೆ ನೀನು ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಿ.

10ಓ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರೊಂದಿಗೆ ಮಾತನಾಡಿ ಹೀಗೆ ಹೇಳು --ನಮ್ಮ ಅಪರಾಧಗಳೂ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲಿ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು; ಎಂದು ಹೇಳುವಿರಲ್ಲಾ?

11ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?

ಯೆಹೆಜ್ಕೇಲನು 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी