ಆ ದಿವಸಗಳಲ್ಲಿ ಪ್ರವಾದಿಗಳಾಗಿದ್ದವರು ಯೆರೂ ಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
25ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೊರಟುಹೊಗಿ
26ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
27ಆ ದಿವಸಗಳಲ್ಲಿ ಪ್ರವಾದಿಗಳಾಗಿದ್ದವರು ಯೆರೂ ಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
28ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.
29ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ